ದಾವಣಗೆರೆ:ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಗೊಂದಲವಿಲ್ಲ. ಸಿದ್ದರಾಮಯ್ಯ ಪ್ರಭಾವಿ ನಾಯಕರು, ವರಿಷ್ಠರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ಸಿದ್ದರಾಮಯ್ಯ ಪ್ರಭಾವಿ ನಾಯಕ, ವಿಪಕ್ಷ ನಾಯಕನ ಆಯ್ಕೆಯಲ್ಲಿ ಗೊಂದಲವಿಲ್ಲ.. ಈಶ್ವರ್ ಖಂಡ್ರೆ - Flood affected area
ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಗೊಂದಲವಿಲ್ಲ. ಸಿದ್ದರಾಮಯ್ಯ ಪ್ರಭಾವಿ ನಾಯಕರು, ವರಿಷ್ಠರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಪಾರದರ್ಶಕವಾಗಿ ನಡೆಯಲಿ. ಪ್ರಜಾತಂತ್ರ ವ್ಯವಸ್ಥೆಗೆ ವಿರುದ್ಧವಾಗಿ ನಡದುಕೊಂಡರೆ ವಿರೋಧಿಸುತ್ತೇವೆ ಎಂದು ಅಧಿವೇಶನದಲ್ಲಿ ದೃಶ್ಯ ಮಾಧ್ಯಮ ಹೊರಗಿಡುವ ಪ್ರಯತ್ನಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು.
ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡಲು ಸರ್ಕಾರ ವಿಫಲವಾಗಿದೆ. ಪ್ರಧಾನಿ ಮೋದಿ ಅವರು ಚಂದ್ರಯಾನ ವೀಕ್ಷಿಸಲು ಕರ್ನಾಟಕಕ್ಕೆ ಬಂದಿದ್ದರು. ಆದರೆ, ಸೌಜನ್ಯಕ್ಕಾದರೂ ಪ್ರವಾಹ ಸಂತ್ರಸ್ತರಿಗೆ ಸಾಂತ್ವನ ಹೇಳಲಿಲ್ಲ. ಅಧಿವೇಶನ ಒಳಗು, ಹೊರಗು ಧ್ವನಿ ಎತ್ತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.