ಕರ್ನಾಟಕ

karnataka

ETV Bharat / city

ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ, ಬೀದಿ ರಂಪ ಮಾಡಿ ಮಂತ್ರಿಗಿರಿ ಪಡೆಯಲ್ಲ: ರೇಣುಕಾಚಾರ್ಯ

ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು ಒಂದಾಗಿದ್ದು, ಸಮಸ್ಯೆ ಇದ್ದರೆ ಕುಳಿತು ಚರ್ಚೆ ಮಾಡುತ್ತೇವೆ. ಭಿನ್ನಮತವೇನೂ ಇಲ್ಲ. ಅವರವರ ಕ್ಷೇತ್ರದಲ್ಲಿ ಶಾಸಕರು ಕೊರೊನಾ ನಿಯಂತ್ರಣಕ್ಕೆ ಕೆಲಸ ಮಾಡುತ್ತಿದ್ದಾರೆ. ಇದನ್ನೇ ತಪ್ಪಾಗಿ ಅರ್ಥೈಸುವುದು ಬೇಡ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

no lobby for minister post mp renukacharya said
ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ, ಹಾದಿ ಬೀದಿ ರಂಪ ಮಾಡಿ ಮಂತ್ರಿಗಿರಿ ಪಡೆಯಲ್ಲ: ರೇಣುಕಾಚಾರ್ಯ

By

Published : Jun 5, 2020, 8:15 PM IST

Updated : Jun 5, 2020, 8:43 PM IST

ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ, ಬೀದಿ ರಂಪ ಮಾಡಿ ಮಂತ್ರಿಗಿರಿ ಪಡೆಯಲ್ಲ: ರೇಣುಕಾಚಾರ್ಯ

ದಾವಣಗೆರೆ:ಕೊರೊನಾ ಸಂಕಷ್ಟದ ವೇಳೆ ರಾಜಕೀಯ ಮಾಡಲು ಹೋಗಬಾರದು.‌ ಸಚಿವ ಸ್ಥಾನಕ್ಕೆ ಎಂದೂ ಲಾಬಿ ಮಾಡಿಲ್ಲ. ಹಾದಿ ಬೀದಿಯಲ್ಲಿ ರಂಪ ಮಾಡಿ ಮಂತ್ರಿ ಸ್ಥಾನ ಪಡೆಯುವ ಜಾಯಮಾನ ನನ್ನದಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ‌.ರೇಣುಕಾಚಾರ್ಯ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮೂರು ಬಾರಿ ಶಾಸಕನಾಗಿದ್ದೇನೆ. ಅಬಕಾರಿ ಸಚಿವನಾಗಿ ಕೆಲಸ ನಿರ್ವಹಿಸಿದ್ದೇನೆ. ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು ಒಂದಾಗಿದ್ದು, ಸಮಸ್ಯೆ ಇದ್ದರೆ ಕುಳಿತು ಚರ್ಚೆ ಮಾಡುತ್ತೇವೆ. ಭಿನ್ನಮತವೇನೂ ಇಲ್ಲ. ಅವರವರ ಕ್ಷೇತ್ರದಲ್ಲಿ ಶಾಸಕರು ಕೊರೊನಾ ನಿಯಂತ್ರಣಕ್ಕೆ ಕೆಲಸ ಮಾಡುತ್ತಿದ್ದಾರೆ. ಇದನ್ನೇ ತಪ್ಪಾಗಿ ಅರ್ಥೈಸುವುದು ಬೇಡ ಎಂದು ಸಮರ್ಥಿಸಿಕೊಂಡರು.

ವಿಜಯೇಂದ್ರ ಹಸ್ತಕ್ಷೇಪ ಮಾಡಿಲ್ಲ:

ಸಿಎಂ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ಪುತ್ರ ಡಾ.‌ ಯತೀಂದ್ರ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು‌. ಆದರೆ ವಿಜಯೇಂದ್ರ ಎಲ್ಲಿಯಾದರೂ ಭಾಗಿಯಾಗಿದ್ದಾರಾ ಎಂದು ಪ್ರಶ್ನಿಸಿದ ಅವರು, ವಿಜಯೇಂದ್ರ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಅಷ್ಟೇ. ಇಬ್ಬರು ಸಿಎಂ ಆಗಿ ಆಡಳಿತ ನಡೆಸುತ್ತಾರೆ ಎಂಬ ಸಿದ್ದರಾಮಯ್ಯ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು.

ಡಿ.‌ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ಸಮಾರಂಭಕ್ಕೆ ಬಿಜೆಪಿಯೇನೂ ಅಡ್ಡಿಪಡಿಸಿಲ್ಲ. ಕೊರೊನಾ ಸಂಕಷ್ಟದ ವೇಳೆ ಸಾಮಾಜಿಕ ಅಂತರ ಎಲ್ಲರೂ ಕಾಪಾಡಿಕೊಳ್ಳಬೇಕು. ಹಾಗಾಗಿ ಸರಳವಾಗಿ ಪದಗ್ರಹಣ ಕಾರ್ಯಕ್ರಮ ನಡೆಸಲಿ ಎಂದ ಅವರು, ಸಿದ್ದರಾಮಯ್ಯ ಹಾಗೂ ಡಿಕೆಶಿ ಸಿಎಂ ಆಗುವ ಭ್ರಮಾ ಲೋಕದಲ್ಲಿದ್ದಾರೆ. ಇದು ಆಗಲ್ಲ. ಇನ್ನೂ ಹತ್ತು ವರ್ಷ ಬಿಜೆಪಿ ರಾಜ್ಯದಲ್ಲಿ ಆಡಳಿತ ನಡೆಸಲಿದೆ ಎಂದು ಹೇಳಿದರು.

Last Updated : Jun 5, 2020, 8:43 PM IST

ABOUT THE AUTHOR

...view details