ದಾವಣಗೆರೆ:ಕೊರೊನಾ 4ನೇ ಅಲೆಯ ಭೀತಿಯಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ರಾಜ್ಯದಲ್ಲಿ ಸಾರ್ವಜನಿಕವಾಗಿ ಮಾಸ್ಕ್ ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ. ಆದರೆ, ನಗರದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರೇ ಮಾಸ್ಕ್ ಧರಿಸದೇ ಭಾಗವಹಿಸಿ, ಸರ್ಕಾರದ ನಿಯಮ ಗಾಳಿಗೆ ತೂರಿದ್ದಾರೆ.
ಇಂದು ದಾವಣಗೆರೆಯಲ್ಲಿ ನಡೆದ ಆತ್ಮನಿರ್ಭರ್ ಕೃಷಿ ಮತ್ತು ಸಿರಿಧಾನ್ಯಗಳ ವರ್ಷಾಚರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್, ಜಗಳೂರು ಶಾಸಕ ಎಸ್.ವಿ.ರಾಮಚಂದ್ರಪ್ಪ, ಎಸ್.ಎ.ರವೀಂದ್ರನಾಥ್ ಹಾಗೂ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.