ದಾವಣಗೆರೆ: ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ದಾವಣಗೆರೆಯಲ್ಲಿ ತನ್ನ ಖಾತೆ ತೆರೆದಿದೆ. ಅಮೆರಿಕದಿಂದ ಆಗಮಿಸಿದ 22 ವರ್ಷದ ಯುವತಿಯಲ್ಲಿ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ.
ಡಿಸೆಂಬರ್ 22ರಂದು ಅಮೆರಿಕದಿಂದ ಬೆಂಗಳೂರಿಗೆ ಬಂದಿದ್ದ ಯುವತಿಗೆ, ಕೊರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತೆ ಹೆಚ್ಚಿನ ತಪಾಸಣೆಗಾಗಿ ಯುವತಿಯ ಸ್ವಾಬ್ ಅನ್ನು ಹಾಸನ ಲ್ಯಾಬ್ಗೆ ಕಳುಹಿಸಿಕೊಡಲಾಗಿತ್ತು.