ದಾವಣಗೆರೆ :ಜಿಲ್ಲೆಯ ಹರಿಹರ ತಾಲೂಕಿನ ದೇವರಬೆಳಕೆರೆ ಪಿಕಪ್ ಅಣೆಕಟ್ಟು ತುಂಬಿ ಹರಿಯುತ್ತಿದೆ. ಅಣೆಕಟ್ಟಿನ ಹಿನ್ನೀರಿಗೆ ಹೊಂದಿಕೊಂಡಿರುವ ಜಮೀನು ಮತ್ತು ಮನೆಗಳು ಸಂಪೂರ್ಣ ಮುಳುಗಡೆಯಾಗಿವೆ. ಭಾರಿ ಮಳೆಗೆ ಮುಳುಗಡೆಗೊಂಡಿದ್ದ ಪ್ರದೇಶದಲ್ಲಿನ ತೋಟದ ಮನೆಯಲ್ಲಿ ಸಿಲುಕಿದ್ದ ಜಾನುವಾರು ಮತ್ತು ನಾಯಿ ಹಾಗೂ ಅದರ ಮರಿಗಳನ್ನು ರಕ್ಷಿಸಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ವಡ್ಡೇರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಯಿಯೊಂದು ತನ್ನ ಮರಿಗಳನ್ನು ರಕ್ಷಿಸಲು ಪರದಾಡುತ್ತಿರುವುದನ್ನು ಕಂಡ ಸ್ಥಳೀಯರು ತೆಪ್ಪದ ಮೂಲಕ ತೆರಳಿ ನಾಯಿ ಮತ್ತು ನಾಯಿ ಮರಿಗಳನ್ನು ರಕ್ಷಿಸಿದ್ದಾರೆ.