ದಾವಣಗೆರೆ: ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪೂಜಾರ್ ವೀರಮಲ್ಲಪ್ಪ ಅಧಿಕಾರ ಸ್ವೀಕರಿಸಿದರು.
ದಾವಣಗೆರೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪೂಜಾರ್ ಮಲ್ಲಪ್ಪ ಅಧಿಕಾರ ಸ್ವೀಕಾರ - ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪೂಜಾರ್ ಮಲ್ಲಪ್ಪ ಅಧಿಕಾರ ಸ್ವೀಕಾರ
ದಾವಣಗೆರೆ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪೂಜಾರ್ ವೀರಮಲ್ಲಪ್ಪ ಅಧಿಕಾರ ಸ್ವೀಕರಿಸಿದರು.
![ದಾವಣಗೆರೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪೂಜಾರ್ ಮಲ್ಲಪ್ಪ ಅಧಿಕಾರ ಸ್ವೀಕಾರ davangere Additional DC](https://etvbharatimages.akamaized.net/etvbharat/prod-images/768-512-5588985-thumbnail-3x2-lek.jpg)
davangere Additional DC
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದ ವೀರಮಲ್ಲಪ್ಪ ಅವರನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ವಾಗತಿಸಿದರು. ಈ ಹಿಂದೆ ವೀರಮಲ್ಲಪ್ಪ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.
ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಪದ್ಮ ಬಸವಂತಪ್ಪ ಅವರು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಕಗೊಂಡ ಕಾರಣ ನಗರಾಭಿವೃದ್ಧಿ ಕೋಶಾಧಿಕಾರಿ ಜಿ.ನಜ್ಮಾ ಅವರು ಪ್ರಭಾರ ಹೆಚ್ಚುವರಿ ಡಿಸಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಪೂಜಾರ್ ಮಲ್ಲಪ್ಪ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.