ದಾವಣಗೆರೆ:ಜಗಳೂರು ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರದ 22 ಕೆರೆಗಳನ್ನು ತುಂಬಿಸುವ ರಾಜನಹಳ್ಳಿ ಏತ ನೀರಾವರಿ ಯೋಜನೆ ಕಳಪೆಯಾಗಿದ್ದು, ಜನಪ್ರತಿನಿಧಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ರಾಜನಹಳ್ಳಿ ಏತ ನೀರಾವರಿ ಕಾಮಗಾರಿ ಕಳಪೆ ಆರೋಪ: ಸಂಸದ ಸಿದ್ದೇಶ್ವರ್ ಗರಂ - ಸಂಸದ ಸಿದ್ದೇಶ್ವರ್
ರಾಜನಹಳ್ಳಿ ಏತ ನೀರಾವರಿ ಯೋಜನೆಯಲ್ಲಿ ತಾಂತ್ರಿಕವಾಗಿ ಲೋಪಗಳು ಕಂಡು ಬಂದಿದ್ದು, ಮಾಹಿತಿ ಕೊಡಿ ಎಂದು ಕೇಳಿದ್ದೇನೆ. ಆದ್ರೆ ಮಾಹಿತಿ ನೀಡಲು ಎಕ್ಸಿಕ್ಯೂಟಿವ್ ಎಂಜಿನಿಯರ್ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.
ಕಾಮಗಾರಿ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ಜಿ.ಎಂ. ಸಿದ್ದೇಶ್ವರ್, 22 ಕೆರೆಗಳಿಗೆ ನೀರು ತುಂಬಿಸುವ ರಾಜನಹಳ್ಳಿ ಏತ ನೀರಾವರಿಯ ಯೋಜನೆಯ ಕಾಮಗಾರಿಯನ್ನು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಎಲ್ ಆ್ಯಂಡ್ ಟಿ ಕಂಪನಿಗೆ ಟೆಂಡರ್ ನೀಡಲಾಗಿತ್ತು. ಕಾಮಗಾರಿ ಕಳಪೆಯಾಗಿದ್ದು, ಇದರಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಲು ಸಾಕಷ್ಟು ಬಾರಿ ಪ್ರಯತ್ನ ಮಾಡಿದ್ರೂ ಕೂಡ ಪ್ರಯೋಜನವಾಗಿಲ್ಲ. ತಾಂತ್ರಿಕವಾಗಿ ಈ ಯೋಜನೆಯಲ್ಲಿ ಲೋಪಗಳು ಕಂಡು ಬಂದಿದ್ದು, ಮಾಹಿತಿ ಕೊಡಿ ಎಂದು ಕೇಳಿದ್ದೇನೆ. ಆದ್ರೆ ಮಾಹಿತಿ ನೀಡಲು ಎಕ್ಸಿಕ್ಯೂಟಿವ್ ಎಂಜಿನಿಯರ್ ಮೀನಾಮೇಷ ಎಣಿಸುತ್ತಿದ್ದಾರೆ. ಅದರಲ್ಲಿ ಏನೀದೆ ನಮಗೆ ಗೊತ್ತಿಲ್ಲ. ನಮಗೆ ಮಾಹಿತಿ ನೀಡಿದರೆ ಬ್ಲಾಕ್ ಲಿಸ್ಟ್ಗೆ ಹಾಕುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಸಾಧ್ಯ ಎಂದರು.
ಅಂದು ಸರ್ಕಾರಗಳು ಹಾಗೂ ಶಾಸಕರು ಬದಲಾವಣೆ ಆಗಿದ್ದರಿಂದ ಕೆಲವು ಗೊಂದಲಗಳಾದವು. ಇದೀಗ ನಮ್ಮ ಸರ್ಕಾರ ಇದೆ. ನಮ್ಮ ಶಾಸಕರಿದ್ದು, ಅದರ ಬಗ್ಗೆ ಗಮನ ಹರಿಸುತ್ತಿದ್ದೇವೆ ಎಂದು ತಿಳಿಸಿದರು.