ದಾವಣಗೆರೆ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ತೀವ್ರ ನಿಗಾ ವಹಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಬೀಡುಬಿಟ್ಟಿದ್ದಾರೆ.
ಪೌರತ್ವ ಬಿಸಿ: ದಾವಣಗೆರೆಯಲ್ಲಿ ಪೊಲೀಸ್ ಬಿಗಿ ಭದ್ರತೆ - ಅಗತ್ಯ ಬಿದ್ದರೆ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ತೀವ್ರ ನಿಗಾ ವಹಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಬೀಡುಬಿಟ್ಟಿದ್ದಾರೆ.
ನಗರದ ಜಯದೇವ ವೃತ್ತದಲ್ಲಿ ಕೆಲವರು ಪ್ರತಿಭಟನೆಗೆ ಮುಂದಾದರೂ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಡಿಸೆಂಬರ್ 21ರವರೆಗೆ ನಿಷೇಧಾಜ್ಞೆ ಜಾರಿ ಇರುವ ಕಾರಣ ಪ್ರತಿಭಟನೆ ನಡೆಸುವಂತಿಲ್ಲ. ಅಗತ್ಯ ಬಿದ್ದರೆ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿ. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಪರಿಣಾಮ ಯಾರೂ ಪ್ರತಿಭಟನೆಗೆ ಮುಂದಾಗಲಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ರೀತಿಯ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೆಲವು ಕಿಡಿಗೇಡಿಗಳು ಹಾಗೂ ಸಮಾಜಘಾತುಕರು ಪ್ರತಿಭಟನೆಗೆ ಕರೆ ನೀಡಿದ್ದಾರೆ ಎಂಬ ಸುಳ್ಳು ಸಂದೇಶಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವುದು ಗಮನಕ್ಕೆ ಬಂದಿದೆ. ತಪ್ಪು ಸಂದೇಶ ಸೃಷ್ಟಿಸಿದರೆ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.