ದಾವಣಗೆರೆ :ಶಾಸಕ ಎಂ ಪಿ ರೇಣುಕಾಚಾರ್ಯ ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಸಲ್ಲಿಸುತ್ತಿರುವ ಸೇವೆಗೆ ಗಾಯಕ ರಾಜೇಶ್ ಕೃಷ್ಣನ್ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ನಲ್ಲೇ ವಾಸ್ತವ್ಯ ಹೂಡಿ, ನಿಸ್ವಾರ್ಥ ಸೇವೆ ಸಲ್ಲಿಸಿದ್ದೀರಿ. ಈ ಸಂಕಷ್ಟ ಪರಿಸ್ಥಿತಿಯಲ್ಲಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದೀರಿ. ನಿಮ್ಮ ಈ ಸೇವೆಗೆ ನಿಜವಾಗಿಯೂ ಹ್ಯಾಟ್ಸ್ಆಫ್ಹೇಳಲೇಬೇಕು.