ಕರ್ನಾಟಕ

karnataka

ETV Bharat / city

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು : ದಾವಣಗೆರೆ ಕೋರ್ಟ್ ತೀರ್ಪು - ದಾವಣಗೆರೆ ಕೋರ್ಟ್ ತೀರ್ಪು

ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಧೀಶರಾದ ಶ್ರೀಪಾದ್ ಎನ್ ಅವರು ಪ್ರಕರಣದ ವಿಚಾರಣೆ ನಡೆಸಿ ಇಂದು ತೀರ್ಪು ಪ್ರಕಟಿಸಿದರು. ಸರ್ಕಾರಿ ವಕೀಲ ಶೌಕತ್ ಅಲಿ ಎಸ್ ಹೆಚ್ ಎಸ್ ಅವರು ವಾದ ಮಂಡಿಸಿದರು..

rape sentence
rape sentence

By

Published : Sep 4, 2021, 3:37 PM IST

ದಾವಣಗೆರೆ :2019ರಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

ಹೊನ್ನಾಳಿಯ ನಿವಾಸಿ ಹಿದಾಯತ್ ಬಾಷಾ ಶಿಕ್ಷೆಗೆ ಒಳಗಾದ ಅಪರಾಧಿ. 2019ರಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಈತ ಅತ್ಯಾಚಾರವೆಸಗಿದ್ದ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಧೀಶರಾದ ಶ್ರೀಪಾದ್ ಎನ್ ಅವರು ಪ್ರಕರಣದ ವಿಚಾರಣೆ ನಡೆಸಿ ಇಂದು ತೀರ್ಪು ಪ್ರಕಟಿಸಿದರು. ಸರ್ಕಾರಿ ವಕೀಲ ಶೌಕತ್ ಅಲಿ ಎಸ್ ಹೆಚ್ ಎಸ್ ಅವರು ವಾದ ಮಂಡಿಸಿದರು.

ಒಂದೆಡೆ ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಮೂಲಕ ಸಂತ್ರಸ್ತೆಗೆ ನ್ಯಾಯಾಲಯಗಳು ನ್ಯಾಯ ಒದಗಿಸುತ್ತಿವೆ. ಇನ್ನೊಂದೆಡೆ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವುದು ವಿಪರ್ಯಾಸ.

ABOUT THE AUTHOR

...view details