ದಾವಣಗೆರೆ:ಅಂದು ಸಿಎಂ ಆಗಿದ್ದ ಬಿ ಎಸ್ ಯಡಿಯೂರಪ್ಪ ಅವರು ಇಡೀ ನಾಯಕ ಸಮುದಾಯಕ್ಕೆ ಕಿವಿಯಲ್ಲಿ ಹೂವು ಇಟ್ಟು, ಮೂಗಿಗೆ ತುಪ್ಪ ಹಚ್ಚಿದ್ರು. ಆದ್ರೆ ಈ ಬಾರಿ ನಡೆಯುವ ನಾಲ್ಕನೇ ವರ್ಷದ ವಾಲ್ಮೀಕಿ ಜಾತ್ರೆಯಲ್ಲಿ ಐತಿಹಾಸಿಕ ತೀರ್ಮಾನ ಕೈಗೊಳ್ಳುತ್ತೇವೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದ ಪುರಿ ಶ್ರೀ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಸರ್ಕಾರಕ್ಕೆ ಫೈನಲ್ ಡೆಡ್ ಲೈನ್ ಕೊಟ್ಟಿದ್ದಾರೆ. ಮುಂದಿನ ತಿಂಗಳು ಫೆ.9ರೊಳಗೆ ವಾಲ್ಮೀಕಿ ಜಾತ್ರೆಯಲ್ಲಿ ನಾಯಕ ಜನಾಂಗಕ್ಕೆ ಶೇ.7.5 ಮೀಸಲಾತಿ ಘೋಷಣೆ ಮಾಡ್ಬೇಕು, ಇಲ್ಲವಾದಲ್ಲಿ ಅದೇ ವಾಲ್ಮೀಕಿ ಜಾತ್ರೆಯಲ್ಲಿ ಐತಿಹಾಸಿಕ ತೀರ್ಮಾನವನ್ನು ನಾವು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.