ದಾವಣಗೆರೆ:ರಾಜ ಕಾಲುವೆ ಒತ್ತುವರಿ ಮಾಡಿಕೊಂಡಿದ್ದ ವಿವೇಕಾನಂದ ಬಡಾವಣೆಯ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ಅಕ್ರಮ ಕಟ್ಟಡಗಳ ತೆರವಿಗೆ ಸ್ಥಳೀಯರ ವಿರೋಧ - ಅಕ್ರಮ ಕಟ್ಟಡಗಳ ತೆರವಿಗೆ ಸ್ಥಳೀಯರ ವಿರೋಧ
ರಾಜ ಕಾಲುವೆಯನ್ನು ಒತ್ತುವರಿ ಮಾಡಿಕೊಂಡು, ನಿರ್ಮಿಸಲಾಗಿದ್ದ ಅಕ್ರಮ ಕಟ್ಟಡಗಳನ್ನು ಸ್ಮಾರ್ಟ್ ಸಿಟಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದಕ್ಕೆ ನಿವೇಶನ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಅಕ್ರಮ ಕಟ್ಟಡಗಳ ತೆರವಿಗೆ ಸ್ಥಳೀಯರ ವಿರೋಧ
ಅಕ್ರಮ ಕಟ್ಟಡಗಳ ತೆರವಿಗೆ ಸ್ಥಳೀಯರ ವಿರೋಧ
ರಾಜಕಾಲುವೆ ಒತ್ತುವರಿ ಹಿನ್ನೆಲೆ ಇಂದು ವಿವೇಕಾನಂದ ಬಡಾವಣೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ರಾಜ ಕಾಲುವೆಯನ್ನೇ ಸ್ಥಳೀಯರು ಒತ್ತುವರಿ ಮಾಡಿದ್ದರು. ಈ ಹಿನ್ನೆಲೆ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳು, ಕಟ್ಟಡಗಳನ್ನು ಸ್ಮಾರ್ಟ್ ಸಿಟಿ ಅಧಿಕಾರಿಗಳು ತೆರವು ಮಾಡಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ನಿವೇಶನ ಮಾಲೀಕರು ನಮಗೆ ಯಾವುದೇ ನೊಟೀಸ್ ನೀಡದೇ ತೆರವುಗೊಳಿಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುಮಾರು 3 ಕಿಲೋಮೀಟರ್ವರೆಗೆ ರಾಜಕಾಲುವೆ ಒತ್ತುವರಿ ಆಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದ್ದಾರೆ.