ಕರ್ನಾಟಕ

karnataka

ETV Bharat / city

ಬೊಲೆರೋ- ಬೈಕ್ ನಡುವೆ ಡಿಕ್ಕಿ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು - Road Accident at davanagere

ಚನ್ನಗಿರಿ ತಾಲೂಕಿನ ವಡ್ನಾಳ್ ಬನ್ನಿಹಟ್ಟಿ ಗ್ರಾಮದ ಕುಮಾರ್, ಓಂಕಾರಪ್ಪ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಬೈಕ್ ಹಾಗೂ ಬೊಲೆರೋ ವಾಹನ ಎರಡೂ ಅತಿ ವೇಗವಾಗಿ ಬಂದ ಕಾರಣ ಡಿಕ್ಕಿಯಾಗಿದೆ. ಇದರಿಂದ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

road accident at davanagere
ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

By

Published : Nov 29, 2021, 1:01 PM IST

ದಾವಣಗೆರೆ:ಬೊಲೆರೋ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗರಗ ಕ್ರಾಸ್ ಬಳಿ ಸೋಮವಾರ ನಡೆದಿದೆ.

ಚನ್ನಗಿರಿ ತಾಲೂಕಿನ ವಡ್ನಾಳ್ ಬನ್ನಿಹಟ್ಟಿ ಗ್ರಾಮದ ಕುಮಾರ್, ಓಂಕಾರಪ್ಪ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಬೈಕ್ ಹಾಗೂ ಬೊಲೆರೋ ವಾಹನ ಎರಡೂ ಅತಿ ವೇಗವಾಗಿ ಬಂದ ಕಾರಣ ಡಿಕ್ಕಿಯಾಗಿದೆ. ಇದರಿಂದ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತದೇಹಗಳನ್ನು ಚನ್ನಗಿರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚನ್ನಗಿರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ​ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿ ಅನುಮಾನಾಸ್ಪದ ಸಾವು!

ABOUT THE AUTHOR

...view details