ದಾವಣಗೆರೆ :ಹರಿಹರ ನಗರ ಠಾಣೆಯ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ 6 ಜನರನ್ನ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ 14,80,000 ಮೌಲ್ಯದ ಒಟ್ಟು 38 ಬೈಕ್‌ಗಳು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರನಗರ ಪೊಲೀಸ್ ಠಾಣೆ ಹಾಗೂ ಇನ್ನಿತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ.