ದಾವಣಗೆರೆ: ಅರಣ್ಯ ಇಲಾಖೆಗೆ ಸೇರಿದ ಜಮೀನು ಒತ್ತುವರಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಕೆಲವರು ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಹೊನ್ನಾಳಿ ತಾಲೂಕಿನ ಹೊನ್ನೂರವಡ್ಡರ ಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದೇ ಗ್ರಾಮದಲ್ಲಿರುವ ಅರಣ್ಯ ಭೂಮಿ ಒತ್ತುವರಿ ಮಾಡಿರುವ ಬಗ್ಗೆ ವಿಚಾರಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮಹಾಂತೇಶ (28) ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.