ದಾವಣಗೆರೆ:ಕರ್ನಾಟಕದಲ್ಲಿ ಪಠ್ಯದ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ನಿಮ್ಮ ಉದ್ಧಟತನಗಳು, ಕಾರ್ಯವೈಖರಿಗಳು ಹೀಗೆ ಮುಂದುವರೆದರೆ ಬಹಳ ಕಷ್ಟ ಅನುಭವಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಶನಿವಾರ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೋಡಿ ಕನಕ ಗುರು ಪೀಠದಲ್ಲಿ ಮಾತನಾಡಿದ ಅವರು, ಅದಷ್ಟು ಬೇಗ ಪಠ್ಯ ಪುಸ್ತಕ ವಿಚಾರದಲ್ಲಿ ಆಗಿರುವ ಗೊಂದಲ ಸರಿಪಡಿಸಿ ಎಂದು ಶ್ರೀಗಳು ಮಾಧ್ಯಮದ ಮೂಲಕ ಶಿಕ್ಷಣ ಸಚಿವರಿಗೆ ಹಾಗೂ ಮುಖ್ಯಮಂತ್ರಿಗೆ ಮನವಿ ಮಾಡಿದರು. ಕುವೆಂಪು, ಬಸವಣ್ಣ, ಕನಕದಾಸರು ಸೇರಿದಂತೆ ಹಲವು ಮಹನೀಯರ ಸತ್ಯ ಜೀವನ ಚರಿತ್ರೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಸರಿಪಡಿಸದಿದ್ದರೆ ಎಲ್ಲರ ಜೊತೆ ಸೇರಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದರು.