ಚಿತ್ರದುರ್ಗ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ನಡೆಸುತ್ತಿರುವ 'ಭಾರತ್ ಬಂದ್'ಗೆ ಎಲ್ಲಾ ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿವೆ ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನೆಲೇನೂರು ಶಂಕರಪ್ಪ ತಿಳಿಸಿದ್ದಾರೆ.
ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತರನ್ನು ತುಳಿಯುವ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದೆ. ಹೀಗಾಗಿ ನಾಳೆ ಭಾರತ್ ಬಂದ್ಗೆ ಕರೆ ನೀಡಿದ್ದು, ಕೋಟೆನಾಡಿನಲ್ಲಿ ಬಂದ್ ಕಾವು ಹೆಚ್ಚಾಗಿರುತ್ತದೆ ಎಂದರು. ಇನ್ನು ನಾಳೆ ಬೆಳಗಿನ ಜಾವ 6 ಗಂಟೆಯಿಂದ ಚಿತ್ರದುರ್ಗ ಬಂದ್ ಆಗಲಿದ್ದು, ವಿವಿಧ ಸಂಘಟನೆಗಳು, ಆಟೋ ಚಾಲಕರ ಸಂಘ, ವಿವಿಧ ರೈತಪರ ಸಂಘಟನೆಗಳು, ಲಾರಿ ಮಾಲೀಕರ ಸಂಘಟನೆಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಬಂದ್ಗೆ ಕೈಜೋಡಿಸಿವೆ ಎಂದರು.