ದಾವಣಗೆರೆ:ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಬೇಕಾದ ಎಲ್ಲ ರೀತಿಯ ಪ್ರಯತ್ನ, ತಂತ್ರ, ಕುತಂತ್ರ ಮಾಡುತ್ತೇವೆ, ಗೆಲ್ಲುತ್ತೇವೆ ಎಂದು ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು.
"ಉಪ ಚುನಾವಣೆಯಲ್ಲಿ ಗೆಲುವಿಗೆ ತಂತ್ರ, ಕುತಂತ್ರ ಎಲ್ಲ ಮಾಡ್ತೇವೆ, ಗೆಲ್ತೇವೆ" ಹೀಗಿದೆ ಶಾಸಕರ ವರಸೆ! - ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್
ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿ ಮುಂದುವರಿಯಬೇಕಾದರೆ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ. ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಬೇಕಾದ ಎಲ್ಲಾ ರೀತಿಯ ಪ್ರಯತ್ನ, ತಂತ್ರ, ಕುತಂತ್ರ ಮಾಡುತ್ತೇವೆ, ಗೆಲ್ಲುತ್ತೇವೆ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿ ಮುಂದುವರಿಯಬೇಕಾದರೆ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ. ಇದಕ್ಕೆ ಬೇಕಾದ ಎಲ್ಲಾ ರೀತಿಯ ಪ್ರಯತ್ನಗಳನ್ನ ಮಾಡುತ್ತೇವೆ ಎಂದು ಹೇಳಿದರು.
ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, ಅಭ್ಯರ್ಥಿಗಳ ಆಯ್ಕೆ ಮಾಡುವುದು ನನಗೆ ಸಂಬಂಧಿಸಿದ್ದಲ್ಲ, ಬಿಜೆಪಿ ವರಿಷ್ಠರು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ನನ್ನನ್ನು ಚುನಾವಣಾ ಪ್ರಚಾರಕ್ಕೆ ಕರೆಯುತ್ತಾರೆ. ಆಗ ನಾನು ಹೋಗುತ್ತೇನೆ. ಅನರ್ಹ ಶಾಸಕರ ವಿಚಾರ ಇನ್ನೂ ಸುಪ್ರೀಂಕೋರ್ಟ್ನಲ್ಲಿರುವುದರಿಂದ ಈ ಬಗ್ಗೆ ಏನೂ ಹೇಳುವುದಿಲ್ಲ ಎಂದರು.