ದಾವಣಗೆರೆ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾದ ಹಿನ್ನೆಲೆಯಲ್ಲಿ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಸರಣಿ ಟ್ವೀಟ್ ಮಾಡಿದ್ದು, ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನಮ್ಮ ಸರ್ಕಾರ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ. ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ?.
ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ.
ರಾಜೀನಾಮೆಗೆ ಸಿದ್ಧ: ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ "ರಾಜೀನಾಮೆ" ನೀಡಲು ಯೋಚಿಸುತ್ತಿದ್ದೇನೆ ಎಂದಿದ್ದಾರೆ.