ಕರ್ನಾಟಕ

karnataka

ETV Bharat / city

ಪ್ರೇಮ ವೈಫಲ್ಯ.. ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ - ದಾವಣಗೆರೆ

ರೈಲಿಗೆ ತಲೆಕೊಡುವ ಮುನ್ನ 'ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿಯೇ ಕಾರಣ' ಎಂದು ವಾಟ್ಸ್‌ಆ್ಯಪ್​​​ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Youth commit suicide
ಮಹಾಂತೇಶ್

By

Published : Aug 11, 2021, 4:01 PM IST

ದಾವಣಗೆರೆ :ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ನಗರದ ಹೆಚ್‌ಕೆಆರ್ ವೃತ್ತದ ಹೊಸ ಲೆನಿನ್‌ ನಗರದ ನಿವಾಸಿ ಮಹಾಂತೇಶ್ (24) ಮೃತ ಯುವಕ. ಕರೂರು ಕೈಗಾರಿಕಾ ಪ್ರದೇಶದಲ್ಲಿನ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ಇಡೀ ಕುಟುಂಬಕ್ಕೆ ಆಧಾರವಾಗಿದ್ದ.

ಆದರೆ, ಮಹಾಂತೇಶ್​ ಕೆಲಸ ಮಾಡುತ್ತಿದ್ದ ಗಾರ್ಮೆಂಟ್ಸ್​​ನಲ್ಲಿನ ಯುವತಿಯೊಬ್ಬಳ ಪರಿಚಯವಾಗಿ ಬಳಿಕ ಅದುಪ್ರೇಮಕ್ಕೆ ತಿರುಗಿತ್ತು. ಆದರೆ, ಯುವತಿ ಮದುವೆಗೆ ನಿರಾಕರಿಸಿದ ಬೆನ್ನಲ್ಲೇ ಮಹಾಂತೇಶ್ ಸಾವಿಗೆ ಶರಣಾಗಿದ್ದಾನೆ.

ಮಹಾಂತೇಶ್ ಮೃತದೇಹ

ರೈಲಿಗೆ ತಲೆಕೊಡುವ ಮುನ್ನ 'ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿಯೇ ಕಾರಣ' ಎಂದು ವಾಟ್ಸ್‌ಆ್ಯಪ್​​​ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details