ದಾವಣಗೆರೆ:ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ 'ಯುವರತ್ನ' ದಾವಣಗೆರೆಯ ಮೂರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.
ಗೀತಾಂಜಲಿ, ಪುಷ್ಪಾಂಜಲಿ ಹಾಗೂ ವಸಂತ ಎಂಬ ಮೂರು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6 ಗಂಟೆಗೆ ಮೊದಲ ಶೋ ಆರಂಭವಾಗಿದೆ. ಅಪ್ಪು ನಟನೆಯ ಸಿನಿಮಾ ವೀಕ್ಷಣೆಗಾಗಿ ಬೆಳಗ್ಗೆ 4 ಗಂಟೆಗೆ ಸರದಿ ಸಾಲಿನಲ್ಲಿ ನಿಂತು ಅಭಿಮಾನಿಗಳು ಟಿಕೆಟ್ ಪಡೆದರು. ಚಿತ್ರಮಂದಿರಗಳ ಬಳಿ ಜಮಾಯಿಸಿದ ನೂರಾರು ಅಭಿಮಾನಿಗಳು, ಪಟಾಕಿ ಸಿಡಿಸಿ ತಮ್ಮ ನೆಚ್ಚಿನ ನಟನ ಪರ ಘೋಷಣೆ ಕೂಗಿದರು. ಈ ವೇಳೆ, ಕಿಕ್ಕಿರಿದು ನಿಂತಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.