ಹುಬ್ಬಳ್ಳಿ:ಜಗತ್ತನ್ನೇ ತಲ್ಲಣಗೊಳಿಸಿದ ಕಿಲ್ಲರ್ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಧಾರವಾಡ ಜಿಲ್ಲಾಡಳಿತ ಸಾಕಷ್ಟು ಶ್ರಮ ವಹಿಸುತ್ತಿದೆ. ಈಗ ಆ್ಯಂಬ್ಯುಲೆನ್ಸ್ ಸೇವೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಅಧುನಿಕ ತಂತ್ರಾಂಶದಲ್ಲಿ ಹೊಸ ನಿರ್ಧಾರ ಕೈಗೊಂಡಿದೆ. ಹಾಗಿದ್ದರೆ ಈ ಸೇವೆಯಲ್ಲಿ ಏನೆಲ್ಲಾ ಇದೆ ಎಂಬುವುದನ್ನು ತೋರಿಸ್ತೀವಿ ನೋಡಿ.
ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವಾಹನಗಳನ್ನು ಆ್ಯಂಬ್ಯುಲೆನ್ಸ್ ಸೇವೆಗೆ ಜಿಲ್ಲಾಡಳಿತ ಸಿದ್ಧಪಡಿಸಿದೆ. ಟೆಂಪೋ ಟ್ರಾವೆಲರ್ಗಳನ್ನು ಆ್ಯಂಬ್ಯುಲೆನ್ಸ್ ಆಗಿ ಪರಿವರ್ತನೆ ಮಾಡಿದ್ದು, ಸೋಂಕಿತರಿಗೆ ತಕ್ಷಣ ಆಸ್ಪತ್ರೆಗೆ ಸಾಗಿಸಲು ವಿನೂತನ ಪ್ರಯತ್ನ ಕೈಗೊಂಡಿದೆ. ಅಲ್ಲದೆ ಜಿಲ್ಲಾಡಳಿತ ಎಲ್ಲಾ ರೀತಿಯಿಂದಲೂ ಸನ್ನದ್ಧವಾಗಿದ್ದು, ಪ್ರತಿಯೊಂದು ಆ್ಯಂಬ್ಯುಲೆನ್ಸ್ನಲ್ಲಿ ಆಕ್ಸಿಜನ್ ಕಿಟ್, ನುರಿತ ಸ್ಟಾಫ್ ನರ್ಸ್ ಹಾಗೂ ಜಿ.ಪಿ.ಎಸ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಇದರಿಂದ ಸೋಂಕಿತರಿಗೆ ತಕ್ಷಣವೇ ಚಿಕಿತ್ಸೆಗೆ ಒಳಪಡಿಸಲು ಇದು ಸಹಾಯಕವಾಗಲಿದೆ.