ಕರ್ನಾಟಕ

karnataka

ETV Bharat / city

ಧಾರವಾಡದ SDM ಮೆಡಿಕಲ್ ಕಾಲೇಜಿನ 116 ವಿದ್ಯಾರ್ಥಿಗಳಿಗೆ ಕೊರೊನಾ: ಒಟ್ಟು ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆ

ಧಾರವಾಡದ ಎಸ್​​ಡಿಎಂ ಮೆಡಿಕಲ್ ಕಾಲೇಜಿನ 116 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿರುವುದರಿಂದ ಯಾರಲ್ಲಿಯೂ ರೋಗದ ಗಂಭೀರ ಸ್ವರೂಪದ ಲಕ್ಷಣಗಳಿಲ್ಲ ಎಂದು ತಿಳಿದು ಬಂದಿದೆ.

dharwad SDM medical college
ಧಾರವಾಡದ ಎಸ್​​ಡಿಎಂ ಮೆಡಿಕಲ್ ಕಾಲೇಜು

By

Published : Nov 26, 2021, 9:46 AM IST

Updated : Nov 26, 2021, 10:49 AM IST

ಧಾರವಾಡ:ನಿನ್ನೆ (ನ.25) ಇಲ್ಲಿನ ಎಸ್​​ಡಿಎಂ ಮೆಡಿಕಲ್ ಕಾಲೇಜಿನ 116 ವಿದ್ಯಾರ್ಥಿಗಳಲ್ಲಿ ಕೋವಿಡ್​​ ಸೋಂಕು ದೃಢಪಟ್ಟಿದೆ. ನ.24ರಂದು ದೃಢಪಟ್ಟ 66 ಪ್ರಕರಣ ಸೇರಿ ಈವರೆಗೆ ಒಟ್ಟು 182 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ನ.17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಅಂತಹ ವ್ಯಕ್ತಿಗಳು ಕೂಡ ಕೋವಿಡ್ ಪರೀಕ್ಷೆಗೆ ಒಳಪಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್.ಕೆ. ಪಾಟೀಲ ತಿಳಿಸಿದ್ದಾರೆ.

ಗುರುವಾರ ಸಂಜೆಯವರೆಗೆ ಮತ್ತೆ ಎಸ್​​ಡಿಎಂ ಆವರಣದ 690 ಜನರನ್ನು ಆರ್​​ಟಿಪಿಸಿಆರ್ ಹಾಗೂ ಆರ್​​ಎಟಿ ತಪಾಸಣೆಗೆ ಒಳಪಡಿಸಲಾಗಿದೆ. ಕಿಮ್ಸ್, ಡಿಮ್ಹಾನ್ಸ್ ಹಾಗೂ ಎಸ್​​ಡಿಎಂನ ಕೋವಿಡ್ ಪ್ರಯೋಗಾಲಯಗಳಲ್ಲಿ ಈ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಒಟ್ಟು 116 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಮಧ್ಯರಾತ್ರಿಯ ನಂತರ ಈ ವರದಿಗಳು ಲಭ್ಯವಾಗಿವೆ. ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿರುವುದರಿಂದ ಯಾರಲ್ಲಿಯೂ ರೋಗದ ಗಂಭೀರ ಸ್ವರೂಪದ ಲಕ್ಷಣಗಳಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಕೊರೊನಾ ಹಾವಳಿ.. ಎಸ್.ಡಿ.ಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ!

ಪಾಲಕರ ತಪಾಸಣೆಗೆ ಸೂಚನೆ:

ನ.17 ರಂದು ಎಸ್​ಡಿಎಂ ಆಸ್ಪತ್ರೆ ಬಳಿಯ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ. ಅಂತಹ ವ್ಯಕ್ತಿಗಳು ಕೂಡ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. ಈವರೆಗೆ ಎಸ್​​ಡಿಎಂ ಆವರಣದಿಂದ ಹೊರಗೆ ಎಲ್ಲಿಯೂ ಪ್ರಕರಣಗಳೂ ವರದಿಯಾಗಿಲ್ಲ.

ಹುಬ್ಬಳ್ಳಿ- ಧಾರವಾಡ ಅವಳಿ ನಗರ ಹಾಗೂ ಜಿಲ್ಲೆಯ ಸಾರ್ವಜನಿಕರಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಸ್ವ್ಯಾಬ್ ನೀಡಿ, ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕೆ ಈ ಮುನ್ನೆಚ್ಚರಿಕೆಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಧಾರವಾಡ SDM ಮೆಡಿಕಲ್‌ ಕಾಲೇಜಿನ 66 ​ವಿದ್ಯಾರ್ಥಿಗಳಿಗೆ ಕೋವಿಡ್‌..2 ಹಾಸ್ಟೆಲ್​ ಸೀಲ್​ಡೌನ್​!

Last Updated : Nov 26, 2021, 10:49 AM IST

ABOUT THE AUTHOR

...view details