ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ ಕುಲಕರ್ಣಿಗೆ ಸದ್ಯಕ್ಕಿಲ್ಲ ರಿಲೀಫ್ - Vinaya Kulkarni judicial custody
12:07 February 04
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ.
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆಯಾಗಿದೆ.
ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ, ವಿಚಾರಣೆಯನ್ನು ಫೆ. 19 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಈ ಮೂಲಕ ಮತ್ತೆ 14 ದಿನ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.
ವಿನಯ್ ಅವರ ಮಾವ ಚಂದ್ರಶೇಖರ್ ಇಂಡಿಗೂ ಫೆ. 19ರ ವರೆಗೆ ಬಂಧನದ ಅವಧಿ ವಿಸ್ತರಣೆ ಮಾಡಲಾಗಿ್ದುದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದಲ್ಲಿದ್ದಾರೆ.