ಕರ್ನಾಟಕ

karnataka

ETV Bharat / city

ಧಾರವಾಡದಲ್ಲಿ ಹೊಸದಾಗಿ 239 ಮಂದಿಗೆ ಕೊರೊನಾ ಸೋಂಕು ದೃಢ - Dharwad corona updates

ಧಾರವಾಡ ಜಿಲ್ಲೆಯಲ್ಲಿಂದು 239 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 14,233 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 11,564 ಮುಂದಿ ವೈರಸ್‌ನಿಂದ ಮುಕ್ತಿ ಪಡೆದಿದ್ದಾರೆ.

239-corona-cases-found-in-dharwad
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್

By

Published : Sep 12, 2020, 10:17 PM IST

ಧಾರವಾಡ: ಜಿಲ್ಲೆಯಲ್ಲಿ ಇಂದು 239 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 14,233 ಕ್ಕೇರಿದೆ.

ಇದುವರೆಗೆ 11,564 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,254 ಪ್ರಕರಣಗಳು ಸಕ್ರಿಯವಾಗಿವೆ. 67 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 415 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಧಾರವಾಡ ಹೊರತುಪಡಿಸಿ ಬೆಳಗಾವಿ, ಹಾವೇರಿ, ದಾವಣಗೆರೆ ಜಿಲ್ಲೆಯ ಪ್ರಕರಣಗಳು ಸಹ ಸೇರಿಕೊಂಡಿವೆ.

ABOUT THE AUTHOR

...view details