ಕರ್ನಾಟಕ

karnataka

ETV Bharat / city

ಕೋವಿಡ್​​ನಿಂದ ಗುಣಮುಖ: ಹುಬ್ಬಳ್ಳಿಯಲ್ಲಿ 40 ಮಂದಿ ಪೊಲೀಸರು ಸೇವೆಗೆ ಹಾಜರು - ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಿಬ್ಬಂದಿಗೆ ಕೋವಿಡ್​​

ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 40 ಮಂದಿ ಪೊಲೀಸರು ಕೋವಿಡ್​​ ಸೋಂಕಿನಿಂದ ಗುಣಮುಖರಾಗಿದ್ದು, ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Police returns to duty after recovering from Covid
ಕೋವಿಡ್​​ನಿಂದ ಗುಣಮುಖರಾಗಿ ಸೇವೆಗೆ ಹಾಜರಾದ ಪೊಲೀಸರು

By

Published : Jan 21, 2022, 11:04 AM IST

ಹುಬ್ಬಳ್ಳಿ:ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 250ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಕಳೆದ ವಾರ ಕೋವಿಡ್​​ ಸೋಂಕು ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿತ್ತು. ಇದೀಗ 40 ಮಂದಿ ಪೊಲೀಸರು ಸೋಂಕಿನಿಂದ ಗುಣಮುಖರಾಗಿದ್ದು, ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಸೋಂಕು ದೃಢಪಟ್ಟ 250 ಸಿಬ್ಬಂದಿಯಲ್ಲಿ ಕೆಲವರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದರು. ಉಳಿದವರ ಆರೋಗ್ಯ ಸ್ಥಿರವಾಗಿತ್ತು. ಹೀಗಾಗಿ ಬುಧವಾರ 20 ಮಂದಿ ಹಾಗೂ ಗುರುವಾರ 20 ಸೇರಿ ಒಟ್ಟು 40 ಮಂದಿ ಸಿಬ್ಬಂದಿ ಕರ್ತವ್ಯಕ್ಕೆ ವಾಪಸ್​ ಆಗಿದ್ದಾರೆ.

ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಎದೆಗುಂದದೇ ಪೊಲೀಸ್ ಸಿಬ್ಬಂದಿ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ:ವೀಕೆಂಡ್ ಕರ್ಫ್ಯೂ ಬೇಕೋ ಬೇಡವೋ ಎಂದು ಕೋವಿಡ್ ಸಭೆಯಲ್ಲಿ ಚರ್ಚಿಸಿ ನಿರ್ಧಾರ: ಸಿಎಂ ಬೊಮ್ಮಾಯಿ

ABOUT THE AUTHOR

...view details