ಧಾರವಾಡ :ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ 45 ಎಕರೆ ಕಬ್ಬು ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ಸಮೀಪದ ದೇವರಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲಿನ ತೆಂಬದ ಸೀಮೆಯ ಹೊಲಗಳಲ್ಲಿ ಕಾಣಿಸಿಕೊಂಡ ಬೆಂಕಿ ಸುತ್ತಲಿನ ಕಬ್ಬಿನ ಗದ್ದೆಗಳಿಗೆ ಆವರಿಸಿಕೊಂಡು, ತೀವ್ರ ಹಾನಿ ಮಾಡಿದ್ದು, ಸುಮಾರು 45 ಎಕರೆ ಕಬ್ಬು ಸುಟ್ಟು ಹೋಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಗದ್ದೆಗೆ ಬೆಂಕಿ ಇದನ್ನೂ ಓದಿರಿ:ಕೆಐಎನಲ್ಲಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣ: ಕಾಮಗಾರಿ ವೀಕ್ಷಿಸಿದ ಸಚಿವ ಅಶ್ವತ್ಥನಾರಾಯಣ
ಮುಲ್ಲಾನವರ 15ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಸೇರಿದ ಜಮೀನುಗಳಲ್ಲಿನ ಕಬ್ಬು ಸುಟ್ಟು ಕರಕಲಾಗಿದೆ.ವಿಷಯ ತಿಳಿದು ಗ್ರಾಮಸ್ಥರು ಬೆಂಕಿ ನಂದಿಸಲು ಯತ್ನಿಸಿದ್ದು, ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಕಟಾವಿಗೆ ಬಂದ ಕಬ್ಬು ಸುಟ್ಟು ಕರಕಲಾಗಿರುವ ಕಾರಣ ಹೆಸ್ಕಾಂ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.