ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವ ದಿನದ ಅಂಗವಾಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ನಗರದ ಶ್ರೀ ಸಿದ್ಧಾರೂಢರ ಮಠದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಸಕ ಅರವಿಂದ್ ಬೆಲ್ಲದ್ ಅವರು ಶ್ರೀ ಭುವನೇಶ್ವರಿ ಮಾತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹುಬ್ಬಳ್ಳಿಯಲ್ಲಿ ಸರಳ ಕನ್ನಡ ರಾಜ್ಯೋತ್ಸವ: ಶಾಸಕ ಅರವಿಂದ ಬೆಲ್ಲದ್ ಚಾಲನೆ ಸ್ವಚ್ಛ ಭಾರತ ಯೋಜನೆ ರಾಯಭಾರಿಯಾಗಿದ್ದ ಪುನೀತ್
ಪ್ರತಿ ವರ್ಷ ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿತ್ತು. ಬೃಹತ್ ಮೆರವಣಿಗೆ ನಡೆಸಲಾಗುತ್ತಿತ್ತು. ಆದ್ರೆ ಈ ಬಾರಿ ಪುನೀತ್ ರಾಜ್ಕುಮಾರ್ ನಿಧನ ಹಿನ್ನೆಲೆ ಕೇವಲ ವೇದಿಕೆಗೆ ಮಾತ್ರ ಕಾರ್ಯಕ್ರಮ ಸೀಮಿತವಾಗಿತ್ತು. ನಟ ಪುನೀತ್ ರಾಜ್ಕುಮಾರ್ ಹು-ಧಾ ಮಹಾನಗರ ಪಾಲಿಕೆ ಸ್ವಚ್ಛ ಭಾರತ ಯೋಜನೆ ರಾಯಭಾರಿಯಾಗಿದ್ದರು. ಹೀಗಾಗಿ ಮೆರವಣಿಗೆ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಿ, ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಯುಪಿ ಚುನಾವಣೆ ಮೇಲೆ ಬೆಲೆ ಏರಿಕೆ ಪರಿಣಾಮ ಬೀರಲ್ಲ:ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಪೆಟ್ರೋಲ್ ಹಾಗು ಡಿಸೇಲ್ ಬೆಲೆ ಇಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಕೆಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.
ಬೆಲೆ ಏರಿಕೆ ವಿಚಾರವಾಗಿ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿರುವುದು ತೆರಿಗೆ ವಸೂಲಿ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಎಲ್ಲಾ ರಾಜ್ಯಗಳಿಗಿಂತಲೂ ರಾಜ್ಯ ಸರ್ಕಾರ ಕಡಿಮೆ ತೆರಿಗೆ ಇದೆ. ಉತ್ತರ ಪ್ರದೇಶ ಚುನಾವಣಾ ಮೇಲೆ ಬೆಲೆ ಏರಿಕೆ ಪರಿಣಾಮ ಬೀರುವುದಿಲ್ಲ. ಬೆಲೆ ಏರಿಕೆ ನಿರಂತರ ಪ್ರಕ್ರಿಯೆ ಎಂದು ಹೇಳಿದರು.
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ 15 ದಿನಗಳಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಅವರು ಈಗಾಗಲೇ ಹೇಳಿದ್ದಾರೆ ಎಂದು ಇದೇ ವೇಳೆ ಶಾಸಕ ಬೆಲ್ಲದ್ ತಿಳಿಸಿದರು.