ಕರ್ನಾಟಕ

karnataka

ETV Bharat / city

ಹುಬ್ಬಳ್ಳಿ ಕಲ್ಲು ತೂರಾಟ ಕೇಸ್: ಇಂದು ಮತ್ತೆ 7 ಜನರ ಬಂಧನ

ಹುಬ್ಬಳ್ಳಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 7 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತರ ಸಂಖ್ಯೆ 133 ಕ್ಕೆ ಏರಿದೆ.

stone-pelt-case
ಕಲ್ಲು ತೂರಾಟ ಕೇಸ್

By

Published : Apr 21, 2022, 7:43 PM IST

ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಿದ ಗಲಭೆಕೋರರನ್ನು ಬಂಧಿಸುವ ಕಾರ್ಯಾಚರಣೆ ದಿನದಿಂದ ದಿನಕ್ಕೆ ಚುರುಕುಗೊಂಡಿದೆ. ಇಂದು ಕೂಡ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ. ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ 133 ಜನರನ್ನು ವಶಕ್ಕೆ ಪಡೆಯಲಾಗಿದೆ. ದಿನದಿಂದ ದಿನಕ್ಕೆ ಬಂಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು 7 ಜನ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಹಳೇ ಹುಬ್ಬಳ್ಳಿಯ ಠಾಣೆಯಿಂದ ವೈದ್ಯಕೀಯ ಪರೀಕ್ಷೆಗೆಂದು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ಇನ್ನು ಗಲಭೆಯ ಮಾಸ್ಟರ್​ಮೈಂಡ್ ಹಾಗೂ ರೌಡಿಶೀಟರ್​ನನ್ನು ಬಂಧಿಸಿದ ಬೆನ್ನಲ್ಲೇ ಕಾರ್ಯಾಚರಣೆ ಮತ್ತಷ್ಟು ಚುರುಕು ಪಡೆದಿದೆ. ಇನ್ನಷ್ಟು ಆರೋಪಿಗಳನ್ನು ಹೆಡೆಮುರಿ ಕಟ್ಟಲು ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಂಧಿತರನ್ನು ಕರೆದುಕೊಂಡು ಹೋಗುವ ವೇಳೆಯಲ್ಲಿ ಪಾಲಕರು ಹೈಡ್ರಾಮಾ ನಡೆಸಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ ಗಲಭೆ ಪ್ರಕರಣ: ಮೌಲ್ವಿ ಮೌಲಾನಾ ವಾಸೀಂ ಪಠಾಣ್ ಪೊಲೀಸ್ ವಶಕ್ಕೆ

ABOUT THE AUTHOR

...view details