ಹುಬ್ಬಳ್ಳಿ(ಧಾರವಾಡ):ಇತ್ತೀಚಿನ ದಿನಗಳಲ್ಲಿ ರಾಜ್ಯ ಅಲ್ಲದೇ ದೇಶದಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿವೆ. ಹೀಗಾಗಿ ಸುಪ್ರೀಂಕೋರ್ಟ್ ಸೂಚನೆಯಂತೆ ದ್ವೇಷ ಭಾಷಣಗಳ ಕಡಿವಾಣಕ್ಕೆ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
'ದ್ವೇಷ ಭಾಷಣ'ಗಳ ಕಡಿವಾಣಕ್ಕೆ ಸುಪ್ರೀಂ ಸೂಚನೆಯಂತೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ - ರಾಜ್ಯದ ದ್ವೇಷ ಭಾಷಣ
ಸುಪ್ರೀಂ ಕೋರ್ಟ್ ಸೂಚನೆಯಂತೆ ದ್ವೇಷ ಭಾಷಣಗಳ ಕಡಿವಾಣಕ್ಕೆ ಸಮಿತಿ ರಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಗುರುವಾರದಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಲಾಗುವುದು. ರಾಜ್ಯ ಅಲ್ಲದೇ ದೇಶದಾದ್ಯಂತ ದ್ವೇಷ ಭಾಷಣ ಹೆಚ್ಚಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದು ಇನ್ನೂ ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸ್ಥಾಯಿಕ ವ್ಯವಸ್ಥೆ ಕುರಿತು ಚರ್ಚಿಸಲು ಏ.30 ರಂದು ದೆಹಲಿಯಲ್ಲಿ ಸಮ್ಮೇಳನ ಆಯೋಜಿಸಲಾಗಿದೆ. ಶುಕ್ರವಾರ(ಇಂದು) ದೆಹಲಿಗೆ ತೆರಳುತ್ತಿದ್ದೇನೆ ಎಂದು ಇದೇ ವೇಳೆ ಹೇಳಿದರು.
ಇದನ್ನೂ ಓದಿ:'ಕರ್ನಾಟಕ ಮಾದರಿ ಕಲಿಕಾ ಚೇತರಿಕೆ ಕಾರ್ಯಕ್ರಮ ಬೇರೆ ರಾಜ್ಯದಲ್ಲೂ ಅಳವಡಿಕೆ ಮಾಡಬೇಕು'
Last Updated : Apr 29, 2022, 11:06 AM IST