ಹುಬ್ಬಳ್ಳಿ:ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ವಿನಾಯಕ ರೆಸಿಡೆನ್ಸಿ ಲಾಡ್ಜ್ನಲ್ಲಿ ನಡೆದಿದೆ.
ಹುಬ್ಬಳ್ಳಿ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ - A man committed suicide by hanging himself
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿರುವ ವಿನಾಯಕ ರೆಸಿಡೆನ್ಸಿ ಲಾಡ್ಜ್ನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
![ಹುಬ್ಬಳ್ಳಿ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಆತ್ಮಹತ್ಯೆ](https://etvbharatimages.akamaized.net/etvbharat/prod-images/768-512-9926587-thumbnail-3x2-fhjk.jpg)
ಆತ್ಮಹತ್ಯೆ
ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಡಬ್ಬು ಗುಂಟಾ ರಾಜೇಂದ್ರ ನೇಣಿಗೆ ಶರಣಾದ ವ್ಯಕ್ತಿ. ಈತನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತನು ವಿನಾಯಕ ರೆಸಿಡೆನ್ಸಿಯಲ್ಲಿ ಡಿಸೆಂಬರ್ 11ರಂದು ರೂಮ್ ಮಾಡಿಕೊಂಡಿದ್ದ. ರೂಮಿನಲ್ಲಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೆಸಿಡೆನ್ಸಿಯ ರೂಮ್ ಬಾಯ್ ಬಾಗಿಲು ಬಡಿದರೂ ತೆಗೆಯದೇ ಇದ್ದಾಗ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಉಪನಗರ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.