ಹುಬ್ಬಳ್ಳಿ: ಕೆರೆಗೆ ಈಜಲು ಹೋಗಿ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಪರಸಾಪುರ ಗ್ರಾಮದಲ್ಲಿ ನಡೆದಿದೆ.
ಕೆರೆಗೆ ಈಜಲು ತೆರಳಿದ್ದ ವ್ಯಕ್ತಿ ಸಾವು ಮಂಜುನಾಥ ಫಕ್ಕೀರಪ್ಪ ಕೇಶಪ್ಪನವರ (35) ಮೃತ ರ್ದುದೈವಿ. ಬಿಸಿಲಿನ ಝಳ ಹೆಚ್ಚಾಗಿದ್ದರಿಂದ ಬುಧವಾರ ಊರಿನಲ್ಲಿರುವ ಕೆರೆಗೆ ಈಜಲು ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ವಿಷಯ ತಿಳಿದ ಗ್ರಾಮಸ್ಥರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ತುರ್ತು ಸೇವೆ ದಳದ ಸಿಬ್ಬಂದಿ ಸಂಜೆಯಿಂದಲೇ ಕಾರ್ಯಾಚರಣೆ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಮತ್ತೆ ಇಂದು ಬೆಳಗ್ಗೆ ಕಾರ್ಯಾಚರಣೆ ನಡೆಸಿ ಶವ ಹೊರ ತೆಗೆದಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ:ಆಕ್ಸಿಜನ್ ಇದ್ದರೂ ನಿಲ್ಲದ ಸಾವಿನ ಸರಣಿ: ಡೆತ್ ಸೀಕ್ರೆಟ್ ತಿಳಿಯಲು ಚಾಮರಾಜನಗರಕ್ಕೆ ಪರಿಣಿತರ ತಂಡ