ಧಾರವಾಡ: ಮನೆಯ ಮುಂದೆ ಮಲಗಿದ ವ್ಯಕ್ತಿಯನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ನವಲಗುಂದ ತಾಲುಕಿನ ಮೊರಬ ಗ್ರಾಮದಲ್ಲಿ ನಡೆದಿದೆ.
ರಮೇಶ ಯರಗಣ್ಣನವರ (45) ಕೊಲೆಯಾದ ವ್ಯಕ್ತಿ. ಮೃತರ ಮಾವ ಲಿಂಬಣ್ಣ ಮೂಗನೂರ ಈ ಕೃತ್ಯ ಮಾಡಿರಬಹುದು ಎಂದು ಶಂಕಿಸಲಾಗಿದೆ. ರಮೇಶ ನಿರಂತರವಾಗಿ ಕಿರುಕುಳ ಕೊಡುತ್ತಿದ್ದನಂತೆ. ಆ ಕಿರುಕುಳ ತಾಳದೇ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.