ಧಾರವಾಡ:ಸರ್ಕಾರಿ ಆಸ್ಪತ್ರೆಯಲ್ಲಿ ಶುಶ್ರೂಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಹೆಬ್ಬಳ್ಳಿ ಗ್ರಾಮದ ಆಸ್ಪತ್ರೆಯಲ್ಲಿ ಹಿರಿಯ ಆರೋಗ್ಯ ಶುಶ್ರೂಷಕಿ ಆಗಿ ಕೆಲಸ ಮಾಡುತ್ತಿದ್ದ ಕಮಲಾ ನಾಗೇಶ್ವರರಾವ್ ಆತ್ಮಹತ್ಯೆಗೆ ಯತ್ನಿಸಿದ ಶುಶ್ರೂಷಕಿ. ಕಮಲಾ ಅವರು ಆಸ್ಪತ್ರೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದರು. ಈ ವೇಳೆ ಇತರ ಸಿಬ್ಬಂದಿ ಕಮಲಾ ಅವರನ್ನು ರಕ್ಷಣೆ ಮಾಡಿದ್ದಾರೆ.
ಧಾರವಾಡ: ಸರ್ಕಾರಿ ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಶುಶ್ರೂಷಕಿ - darawada latest news
ಹೆಬ್ಬಳ್ಳಿ ಗ್ರಾಮದ ಆಸ್ಪತ್ರೆಯಲ್ಲಿ ಹಿರಿಯ ಆರೋಗ್ಯ ಶುಶ್ರೂಷಕಿ ಆಗಿ ಕೆಲಸ ಮಾಡುತ್ತಿದ್ದ ಕಮಲಾ ನಾಗೇಶ್ವರರಾವ್ ಆತ್ಮಹತ್ಯೆಗೆ ಯತ್ನಿಸಿದ್ದು, ಇತರ ಸಿಬ್ಬಂದಿ ಕಮಲಾ ಅವರನ್ನು ರಕ್ಷಣೆ ಮಾಡಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಶುಶ್ರೂಷಕಿ
ಇದನ್ನೂ ಓದಿ:ಜೂಜುಕೋರರ ವಿರುದ್ಧ ಕೇಸ್ ದಾಖಲಿಸದ ಮೂವರು ಸಿಬ್ಬಂದಿ ಅಮಾನತು
ಕಮಲಾ ಅವರ ಆತ್ಮಹತ್ಯೆ ಯತ್ನಕ್ಕೆ ಮೇಲಧಿಕಾರಿಗಳ ಕಿರುಕುಳ ಕಾರಣ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Last Updated : Sep 16, 2021, 10:12 AM IST