ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿರುವ ಪೊಲೀಸ್ ಅಧಿಕಾರಿಯೊಬ್ಬರು ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಯಲ್ಲಿ ರೋಗಿಯೊಬ್ಬರು ಶಸ್ತ್ರಚಿಕಿತ್ಸೆಗೆ ಒಳಗಾದ ಹಿನ್ನೆಲೆ ರಕ್ತದ ಅವಶ್ಯಕತೆ ಇರುವುದರಿಂದ ಧಾರವಾಡ ಜಿಲ್ಲೆಯ ಗುಡಗೇರಿ ಪೊಲೀಸ್ ಠಾಣೆಯ ಪಿಎಸ್ಐ ನವೀನ ಜಕ್ಕಲಿಯವರು ರಕ್ತದಾನ ಮಾಡಿದ್ದಾರೆ.
ಕರ್ತವ್ಯದ ನಡುವೆ ರಕ್ತದಾನ ಮಾಡಿ ಜೀವ ಉಳಿಸಿದ ಗುಡಗೇರಿಯ ಪಿಎಸ್ಐ! - blood donated by the police
ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಹಗಲು ರಾತ್ರಿ ಎನ್ನದೆ ನಾಗರಿಕರ ಸೇವೆಯಲ್ಲಿ ತೊಡಗಿದ್ದಾರೆ. ಈ ನಡುವೆ ಧಾರವಾಡದ ಪೊಲೀಸ್ ಅಧಿಕಾರಿಯೊಬ್ಬರು ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ರಕ್ತದಾನ ಮಾಡಿ ಜೀವ ಉಳಿಸಿದ್ದಾರೆ.
![ಕರ್ತವ್ಯದ ನಡುವೆ ರಕ್ತದಾನ ಮಾಡಿ ಜೀವ ಉಳಿಸಿದ ಗುಡಗೇರಿಯ ಪಿಎಸ್ಐ! A PSI saves a patient's life with donate his blood while on duty](https://etvbharatimages.akamaized.net/etvbharat/prod-images/768-512-7185978-600-7185978-1589384786047.jpg)
ಕರ್ತವ್ಯದ ನಡುವೆ ರಕ್ತದಾನ ಮಾಡಿ ಜೀವ ಉಳಿಸಿದ ಗುಡಗೇರಿಯ ಪಿಎಸ್ಐ
ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿ ರಕ್ತದಾನ ಮಾಡುವ ಮೂಲಕ ರೋಗಿಯೊಬ್ಬರಿಗೆ ಜೀವದಾನ ಮಾಡಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ರಕ್ತ ನಿಧಿಗಳಲ್ಲಿ ರಕ್ತದ ಅಭಾವ ಇರುವುದರಿಂದ ಕರ್ತವ್ಯನಿರತ ಪೊಲೀಸ್ ಅಧಿಕಾರಿ ನವೀನ ಜಕ್ಕಲಿಯವರು ರಕ್ತದಾನ ಮಾಡಿರುವುದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಪ್ರಸ್ತುತ ದಿನಮಾನಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೂಡ ಪೊಲೀಸ್ ಅಧಿಕಾರಿ ಸಾರ್ವಜನಿಕ ಸೇವೆಗೆ ಮುಂದಾಗಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.