ಹುಬ್ಬಳ್ಳಿ: ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪುನ್ನು ಮುಸ್ಲಿಂ ಬಾಂಧವರು ಸ್ವೀಕರಿಸಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಬ್ದುಲ್ ಖಾದರ್ ನಡಕಟ್ಟಿನ ಹೇಳಿದರು.
ಹಿಜಾಬ್ ವಿಚಾರದಲ್ಲಿ ಹೋರಾಟ ಸರಿಯಲ್ಲ ಎಂದು ಅಬ್ದುಲ್ ಖಾದರ್ ನಡಕಟ್ಟಿನ ಅಭಿಪ್ರಾಯ ವ್ಯಕ್ತಪಡಿಸಿರುವುದು.. ನಗರದಲ್ಲಿ ಇಂದು ಮಾತನಾಡಿದ ಅವರು, ಮಹಮ್ಮದ್ ಪೈಗಂಬರ್ ಅವರು ನಾವು ಯಾವ ದೇಶದಲ್ಲಿ ಇರುತ್ತೇವೆಯೋ ಆ ದೇಶದ ನಿಯಮಗಳನ್ನು ಪಾಲನೆ ಮಾಡಬೇಕೆಂಬ ಸಂದೇಶ ನೀಡಿದ್ದಾರೆ.
ರಾಜ್ಯದ ಉನ್ನತ ನ್ಯಾಯಾಲಯ ನೀಡಿರುವ ಆದೇಶ ಪಾಲನೆ ಮಾಡಬೇಕು. ನಮ್ಮ ನೆಲದ ಕಾನೂನಿಗೆ ಗೌರವ ನೀಡಬೇಕು. ಹಿಜಾಬ್ ವಿಚಾರದಲ್ಲಿ ಹೋರಾಟ ಮಾಡುವುದು ಸರಿಯಲ್ಲ ಎಂದರು.
ಇದನ್ನು ಓದಿ:ಹಿಜಾಬ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ಹೀಗಿದೆ ಅರ್ಜಿದಾರರ ಮನವಿ