ಧಾರವಾಡ: ಹೈದ್ರಾಬಾದ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹ - dharwad ABVP protest news
ಹೈದ್ರಾಬಾದ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಧಾರವಾಡ ಎಬಿವಿಪಿ ಪ್ರತಿಭಟನೆ
ಹೈದ್ರಾಬಾದ್ ಪಶುವೈದ್ಯೆಯನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಜೀವಂತವಾಗಿ ದಹನ ಮಾಡಿದ ಘಟನೆಯನ್ನು ಎಬಿವಿಪಿ ಖಂಡಿಸಿದೆ. ಈ ಕ್ರೂರ ಘಟನೆಗೆ ಕಾರಣರಾದವರಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕು. ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳು, ಅತ್ಯಾಚಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.