ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ವಿಭಾಗದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಎಸಿಪಿ ಮಾಹಾಂತೇಶ್ ಜಿದ್ದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ವಿವೇಕ ಕಾರೇಕರ್ ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ಎಸಿಬಿ ದಾಳಿ - Hubli-Dharwad Urban Development Authority
ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ 5.80 ಲಕ್ಷ ರೂ.ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ಎಸಿಬಿ ದಾಳಿ
ವಿವೇಕ ಕಾರೇಕರ್ ಹುಬ್ಬಳ್ಳಿ-ಧಾರವಾಡ ನಗರ ಯೋಜನಾ ಸದಸ್ಯರಾಗಿದ್ದಾರೆ. ಎಸಿಬಿ ದಾಳಿ ವೇಳೆ 5.80 ಲಕ್ಷ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಒಬ್ಬರು ಡಿಎಸ್ಪಿ, ಮೂವರು ಇನ್ಸ್ಪೆಕ್ಟರ್ ಸೇರಿ 20ಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು ಯೋಜನಾ ವಿಭಾಗದ ಕಡತ ವಿಲೇವಾರಿ ಮಾಡುತ್ತಿದ್ದು, ಕಡತ ವಿಲೇವಾರಿ ಬಳಿಕ ಇನ್ನಷ್ಟು ಭ್ರಷ್ಟಾಚಾರ ಆರೋಪ ಹೊರಬರುವ ಸಾಧ್ಯತೆಯಿದೆ.
ಇದನ್ನೂ ಓದಿ:ಹಾವೇರಿ ಡಿಡಿಪಿಐ ಕಚೇರಿ ಮೇಲೆ ಎಸಿಬಿ ದಾಳಿ: ದಾಖಲೆ ಇಲ್ಲದ 1 ಲಕ್ಷದ 69 ಸಾವಿರ ರೂ. ಜಪ್ತಿ
TAGGED:
ಎಸಿಬಿ ದಾಳಿ