ಹುಬ್ಬಳ್ಳಿ:ಕೆಐಎಡಿಬಿ ಕಚೇರಿ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಎಸಿಬಿಗೆ ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿಯ ರಾಯಾಪುರ ಬಳಿಯ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ, 70 ಸಾವಿರ ನಗದು ಸೇರಿದಂತೆ ಮಹತ್ವದ ದಾಖಲೆಗಳನ್ನ ಜಪ್ತಿ ಮಾಡಿದ್ದಾರೆ.
ಕೆಐಎಡಿಬಿ ಕಚೇರಿಯಲ್ಲಿ ದೊಡ್ಡಮಟ್ಟದ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಾದಿರಾಜ ಮನ್ನಾರಿ ಹಾಗೂ ಶಿವಾಜಿ ಎನ್ನುವವರು ಪ್ರತ್ಯೇಕ ದೂರು ನೀಡಿದ್ದರು. ಈ ದೂರಿನ ಅನ್ವಯ ಎಸಿಬಿ ಎಸ್ಪಿ ಎಸ್.ನ್ಯಾಮೇಗೌಡ ನೇತೃತ್ವದ ತಂಡ ಕೆಐಎಡಿಬಿ ಕಚೇರಿ ಮೇಲೆ ದಾಳಿ ನಡೆಸಿ ನಗದು ಸೇರಿದಂತೆ ದಾಖಲಾತಿಗಳನ್ನ ವಶಪಡಿಸಿಕೊಂಡಿದ್ದಾರೆ.