ಹುಬ್ಬಳ್ಳಿ: ನ್ಯೂ ಕಾಟನ್ ಮಾರ್ಕೆಟ್‌ನಲ್ಲಿರುವ ಆ್ಯಕ್ಸಿಸ್ ಬ್ಯಾಂಕ್ ಎಟಿಎಂ (Axis Bank ATM) ನಲ್ಲಿ ಹಣ ಕಳ್ಳತನ ಮಾಡಲು ಯತ್ನಿಸಿದ ಆರೋಪಿ ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಅ.13 ರಂದು ತಡರಾತ್ರಿ ಆ್ಯಕ್ಸಿಸ್ ಬ್ಯಾಂಕ್ ಎಟಿಎಂ (Axis Bank ATM) ಒಳಗೆ ರಾಡ್ ಹಿಡಿದುಕೊಂಡು ಬಂದ ವ್ಯಕ್ತಿಯೊಬ್ಬ, ಎಟಿಎಂ ಮಷಿನ್ (ATM machine)ಗೆ ಅಳವಡಿಸಿದ್ದ ವೈರ್‌ಗಳನ್ನು ಕಿತ್ತು ಕಳ್ಳತನ ಮಾಡಲು ಮುಂದಾಗಿದ್ದ. ಇದನ್ನು ಸ್ಥಳೀಯರು ಗಮನಿಸಿದ ಹಿನ್ನೆಲೆ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದ. ಈ ಕುರಿತು ಬ್ಯಾಂಕ್ ಅಧಿಕಾರಿಗಳು ಉಪನಗರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಇನ್ಸ್ಪೆಕ್ಟರ್ ರವಿಚಂದ್ರ ಡಿ.ಬಿ. ಹಾಗೂ ಸಿಬ್ಬಂದಿ ಎಟಿಎಂನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ಆರೋಪಿಯ ಚಹರೆ ಆಧಾರದ ಮೇಲೆ ಹುಡುಕಾಟ ಆರಂಭಿಸಿ, ಕೊನೆಗೂ ಕಳ್ಳನನ್ನು ಬಂಧಿಸಿದ್ದಾರೆ. ಇನ್ನು ಪಿಎಸ್‌ಐಗಳಾದ ಬಿ.ಎಸ್.ಪಿ. ಅಶೋಕ್, ಯು.ಎಂ. ಪಾಟೀಲ ಹಾಗೂ ಸಿಬ್ಬಂದಿ ಕಾರ್ಯಕ್ಕೆ ಆಯುಕ್ತ ಲಾಬೂರಾಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.