ಹುಬ್ಬಳ್ಳಿ: ಕಲಘಟಗಿ ಕಾರ್ಮಿಕ ಇಲಾಖೆಯಲ್ಲಿ ಏಜೆಂಟ್ ಹಾವಳಿ ಜೋರಾಗಿದೆ. ಕಾರ್ಮಿಕ ಇಲಾಖೆ ಕಾರ್ಡ್ ಮಾಡಿಕೊಡಲು ಹಣ ವಸೂಲಿ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.
ಸರ್ಕಾರಿ ಕಚೇರಿಯಲ್ಲಿ ಏಜೆಂಟ್ ಹಾವಳಿ: ಹಣ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್ - Agent plagued
ಕಲಘಟಗಿ ಸರ್ಕಾರಿ ಕಚೇರಿಯಲ್ಲಿ ಏಜೆಂಟ್ಗಳ ಹಾವಳಿ ಹೆಚ್ಚಾಗಿದ್ದು, ಕಾರ್ಮಿಕ ಕಾರ್ಡ್ ಮಾಡಿಕೊಡಲು ರಾಜಾರೋಷವಾಗಿ ದುಪ್ಪಟ್ಟು ಹಣ ಪೀಕುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.
ಅಧಿಕಾರಿಗಳು ಹಣ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್
ಕಾರ್ಮಿಕರಿಗೆ ಸರ್ಕಾರ ಹಲವು ಸೌಲಭ್ಯಗಳನ್ನು ಘೋಷಣೆ ಮಾಡಿದೆ. ಆದರೆ, ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಕಾರ್ಮಿಕ ಕಾರ್ಡ್ ಅವಶ್ಯಕ. ಇದನ್ನೇ ಕೆಲವು ಏಜೆಂಟ್ಗಳು ಬಂಡವಾಳ ಮಾಡಿಕೊಂಡು ಕಾರ್ಮಿಕರಿಂದ ಹಣ ವಸೂಲಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಒಂದು ಕಾರ್ಮಿಕರ ಕಾರ್ಡ್ ಮಾಡಲು ಸರ್ಕಾರದ ವತಿಯಿಂದ 25-30 ರೂ. ಶುಲ್ಕವಿದೆ. ಆದರೆ ಒಂದೊಂದು ಕಾರ್ಡ್‌ಗೆ 600-700 ರೂ.ಗಳನ್ನು ರಾಜಾರೋಷವಾಗಿ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಬಡ ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡಾ ಆಗಿದೆ.