ಹುಬ್ಬಳ್ಳಿ:ಕೇಂದ್ರ ಸರ್ಕಾರ ಜಾರಿ ಮಾಡಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ನಿಂದ ವಾಹನ ತಪಾಸಣೆ ನಡೆಸಲಾಯಿತು.
ಸರ್ಕಾರದ ನಿರ್ದೇಶನದ ಮೇರೆಗೆ ರಾತ್ರೋರಾತ್ರಿ ರಸ್ತೆಗೆ ಇಳಿದ ಪೊಲೀಸರು ಚೆನ್ನಮ್ಮ ವೃತ್ತ, ಕೇಶ್ವಾಪುರ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ವಾಹನಗಳ ತಪಾಸಣೆ ನಡೆಸಿ ಸೂಚನೆ ನೀಡುತ್ತಿದ್ದಾರೆ. ಧಾರವಾಡದಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಹಲವಾರು ಯುವಕರು ಅಲ್ಲಲ್ಲಿ ಗಲಾಟೆ ಮಾಡಲು ಗುಂಪು ಸೇರುತ್ತಿದ್ದು, ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗವಹಿಸುತ್ತಿರುವುದು ಕಂಡು ಬರುತ್ತಿದೆ.