ಧಾರವಾಡ: ಡಿ.10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆ ಇಂದು ಸಂಜೆ 4 ಗಂಟೆಯಿಂದ ಡಿಸೆಂಬರ್ 10ರ ಸಂಜೆ 4ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು, ಮದ್ಯಸಾಗಣೆ, ಸಂಗ್ರಹಣೆ ನಿಷೇಧಿಸಲಾಗಿದೆ. ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಆದೇಶ ಹೊರಡಿಸಿದ್ದಾರೆ.