ಹುಬ್ಬಳ್ಳಿ: 10 ವರ್ಷಗಳ ನಂತರ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಗೆ ವೇದಿಕೆ ಸಜ್ಜುಗೊಂಡಿದ್ದು, ಕಮಲ ಪಡೆಯ ನಾಯಕರ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ.
ಇಂದು ಮತ್ತು ನಾಳೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿಗೆ ಸಿದ್ಧತೆ ನಡೆದಿದ್ದು, ಇಡೀ ನಗರ ಕೇಸರಿಮಯವಾಗಿದೆ. ದಶಕದ ನಂತರ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ನಿರ್ಧರಿಸಿದ್ದು, ಎರಡು ದಿನಗಳ ಕಾಲ ನಡೆಯುವ ಈ ಸಭೆಗೆ ಕೇಸರಿ ಪಡೆಯ ದಂಡೇ ಆಗಮಿಸಲಿದೆ.
ಬಿಜೆಪಿ ಕಾರ್ಯಕಾರಣಿ ಸಭೆಗೆ ಹುಬ್ಬಳ್ಳಿಯಲ್ಲಿ ಸಕಲ ಸಿದ್ಧತೆ ನಗರದ ಡೆನಿಸನ್ಸ್ ಹೋಟೆಲ್ನಲ್ಲಿ ಕಾರ್ಯಕಾರಿಣಿ ಆಯೋಜನೆಗೊಂಡಿದೆ. ಈ ಹಿನ್ನೆಲೆಯಲ್ಲಿ ಗೋಕುಲ ರಸ್ತೆ, ಚೆನ್ನಮ್ಮ ವೃತ್ತ, ಕ್ಲಬ್ ರಸ್ತೆ, ಸ್ಟೇಷನ್ ರಸ್ತೆ ಸೇರಿದಂತೆ ನಗರದ ತುಂಬೆಲ್ಲ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ನಾಯಕರ ಸ್ವಾಗತಕ್ಕೆ ಸ್ವಾಗತ ಕಮಾನುಗಳು, ಬಿಜೆಪಿಯ ಬಾವುಟಗಳನ್ನು ಹಾಕಲಾಗಿದೆ. ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಬಿಜೆಪಿ ನಾಯಕರು ಭಾಗಿಯಾಗುವ ಮೂಲಕ ಹಲವು ಪ್ರಮುಖ ವಿಷಯಗಳ ಚರ್ಚೆ ನಡೆಸಲಿದ್ದಾರೆ.
ಇದನ್ನೂ ಓದಿ:Year Ender 2021: ರಾಜ್ಯವನ್ನು ಬೆಚ್ಚಿ ಬೀಳಿಸಿದ ರಾಜಧಾನಿಯ ಅಪರಾಧ, ಅಪಘಾತ ಪ್ರಕರಣಗಳ ಹಿನ್ನೋಟ