ಧಾರವಾಡ: ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮನೆ ಮನೆಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಕೊರೊನಾ ಸೋಂಕು ಹರಡದಂತೆ ಅಂಗನವಾಡಿ ಕಾರ್ಯಕರ್ತೆಯರಿಂದ ಜಾಗೃತಿ - ಜಾಗೃತಿ ಮೂಡಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು
ಬೇರೆ ಬೇರೆ ರಾಜ್ಯಗಳಿಂದ ಬಂದ ವಲಸಿಗರ ಮನೆಗೆ ಹೋಗಿ ಹೊರಗೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಂಗನವಾಡಿ ಕಾರ್ಯಕರ್ತೆಯರು ಸಲಹೆ ನೀಡಿದರು.
ಜಾಗೃತಿ ಮೂಡಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು
ಕೊರೊನಾ ಸೋಂಕು ತಗುಲುವ ಮುನ್ನ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ರೋಗದ ಲಕ್ಷಣಗಳು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಜನರಲ್ಲಿ ಅರಿವು ಮೂಡಿಸಿದರು.