ಧಾರವಾಡ: ಜಿಲ್ಲೆಯ ಧಾರವಾಡದ ನವಲೂರಿನಲ್ಲಿ ಇಂದು ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಧಾರವಾಡದಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ ಪತ್ತೆ... ಮತ್ತಷ್ಟು ಹೆಚ್ಚಿದ ಆತಂಕ - Corona case in dharwad
ಧಾರವಾಡದಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 11ಕ್ಕೇರಿದೆ. ಇದರಲ್ಲಿ 6 ಜನ ಗುಣಮುಖರಾಗಿದ್ದಾರೆ.
ಕೊರೊನಾ
ಕೆಮ್ಮು, ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದ ನವಲೂರು ಪಠಾಣಗಲ್ಲಿಯ 26 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದು ಜಿಲ್ಲೆಯ 11ನೇ ಪ್ರಕರಣವಾಗಿದೆ.
ಈಗಾಗಲೇ ಜಿಲ್ಲೆಯಲ್ಲಿ 6 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.