ಹುಬ್ಬಳ್ಳಿ (ಧಾರವಾಡ):ಈ ಹಿಂದೆ ಸಿದ್ದರಾಮಯ್ಯ ಸರ್ಕಾರವಿದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ, ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ನಗರದಲ್ಲಿಂದು ಕಾರ್ಯಕಾರಣಿ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ನಡೆಯುತ್ತಿದೆ. ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಕಾಂಗ್ರೆಸ್ ಮಾಡುತ್ತಿದೆ. ನಾವು ಎರಡು ದಿನಗಳ ಕಾಲ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ ಎಂದರು.