ಧಾರವಾಡ: ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಡುವಿನ ಮಾತಿನ ಯುದ್ಧ ಮುಗಿದು ಹೋದ ಅಧ್ಯಾಯ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿದರು.
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯದ ವರದಿ ಪ್ರಕಾರ ಕೆಆರ್ಎಸ್ ಅಣೆಕಟ್ಟು ಬಿರುಕು ಬಿಟ್ಟಿಲ್ಲ. ಸರ್ಕಾರ ಅದರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತದೆ ಎಂದು ಭರವಸೆ ನೀಡಿದರು.
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ ಮುಂದಿನ ಸಿಎಂ ಉತ್ತರ ಕರ್ನಾಟಕದವರು ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ ಎಂದು ಕತ್ತಿಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಕಾಂಗ್ರೆಸ್ ಪಕ್ಷದಲ್ಲಿಯೇ ಭ್ರಷ್ಟಾಚಾರ ನಡೆದಿದ್ದು, ಈಗ ಅವರು ನಮ್ಮ ಕಡೆ ಬೆರಳು ಮಾಡಿ ತೋರಿಸುತ್ತಾರೆ. ಬಿಜೆಪಿಯಲ್ಲಿ ಯಾವ ಭ್ರಷ್ಟಾಚಾರವಾಗಿದೆ ಎಂಬುದನ್ನು ತೋರಿಸಲಿ, ಭ್ರಷ್ಟಾಚಾರಿಗಳಿಗೆ ನಮ್ಮ ಪಕ್ಷದಲ್ಲಿ ಅವಕಾಶವಿಲ್ಲ ಎಂದರು.
ಬಿಜೆಪಿ ಅವರದ್ದು 10% ಸರ್ಕಾರ ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ, ನಮ್ಮ ಸರ್ಕಾರದಲ್ಲಿ ಯಾವುದೇ ಪರ್ಸೆಂಟೇಜ್, ಭ್ರಷ್ಟಾಚಾರ ಇಲ್ಲ. ಬಿಎಸ್ವೈ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದರು.