ಧಾರವಾಡ: ಸಹಾಯಧನ ವಿಳಂಬ ಹಿನ್ನೆಲೆ ಆಟೋ ಚಾಲಕರ ಸಂಘದ ನೇತೃತ್ವದಲ್ಲಿ ಆಟೋ ಚಾಲಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.
ಆಟೋ ಚಾಲಕರಿಗೆ ಸಹಾಯಧನ ವಿಳಂಬ: ಪ್ರತಿಭಟನೆ - auto drivers protest against state government
ಸಹಾಯಧನ ವಿಳಂಬ ಮಾಡುತ್ತಿರುವ ಸರ್ಕಾರದ ವಿರುದ್ಧ ಆಟೋ ಚಾಲಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ರಾಜ್ಯದಲ್ಲಿ 7.75 ಲಕ್ಷ ಆಟೋ ಚಾಲಕರ ಪೈಕಿ, 2.25 ಚಾಲಕರು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 25 ಸಾವಿರ ಮಂದಿಗೆ ಮಾತ್ರ ಹಣ ಬಂದಿದೆ. ಉಳಿದವರಿಗೂ ಸಹಾಯಧನ ಬಿಡುಗಡೆ ಮಾಡುವಂತೆ ಆಗ್ರಹಿಸಲಾಯಿತು.
ಅರ್ಜಿ ಸಲ್ಲಿಸಲು ನಾನಾ ದಾಖಲೆಗಳನ್ನು ಸಲ್ಲಿಸಬೇಕಿದೆ. ಇದು ಎಲ್ಲರಿಗೂ ಸಾಧ್ಯವಿಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸರಳಗೊಳಿಸುವಂತೆ ಆಟೋ ಚಾಲಕರು ಮನವಿ ಮಾಡಿದರು.