ಕರ್ನಾಟಕ

karnataka

ETV Bharat / city

ಆಯುಷ್ಮಾನ್ ಭಾರತ ಆರೋಗ್ಯ ಯೋಜನೆ ಅನುಷ್ಠಾನ: ಧಾರವಾಡ ಜಿಲ್ಲಾಸ್ಪತ್ರೆಗೆ ಮೊದಲ ರ್‍ಯಾಂಕ್ - ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ

ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಅನುಷ್ಠಾನದಲ್ಲಿ ಧಾರವಾಡ ಜಿಲ್ಲಾಸ್ಪತ್ರೆಯಿಂದ ಸಾಧನೆ. ಸಿಬ್ಬಂದಿಯ ಕಾರ್ಯಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಶಂಸೆ.

dharawad-civil-hospital
ಧಾರವಾಡ ಜಿಲ್ಲಾಸ್ಪತ್ರೆಗೆ ಮೊದಲ ರ್‍ಯಾಂಕ್

By

Published : Dec 24, 2019, 12:14 PM IST

ಧಾರವಾಡ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿರುವ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಅನುಷ್ಠಾನದಲ್ಲಿ ಇಲ್ಲಿನ ಜಿಲ್ಲಾಸ್ಪತ್ರೆ ಉತ್ತಮ ಸಾಧನೆ ತೊರಿದೆ.

ಆರೋಗ್ಯ ಯೋಜನೆಯ ಅನುಷ್ಠಾನ ಮಾಡಿರುವ ಇಲ್ಲಿನ ಜಿಲ್ಲಾಸ್ಪತ್ರೆ ( ಸಿವಿಲ್ ಆಸ್ಪತ್ರೆ) ರಾಜ್ಯದ ಶ್ರೇಯಾಂಕ ಪಟ್ಟಿಯಲ್ಲಿ ಸತತ ಒಂದೂವರೆ ತಿಂಗಳಿನಿಂದ ಮೊದಲ ಸ್ಥಾನ ಕಾಯ್ದುಕೊಂಡಿದೆ.

ಧಾರವಾಡ ಜಿಲ್ಲಾಸ್ಪತ್ರೆಗೆ ಮೊದಲ ರ್‍ಯಾಂಕ್
ಜಿಲ್ಲಾ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸಹಕಾರದಿಂದ ರೋಗಿಗಳಿಗೆ ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯಲು ತ್ವರಿತವಾಗಿ ಪೂರ್ವಾನುಮತಿ (Pre Authorizations) ನೀಡುತ್ತಿರುವುದರಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಕೆ.ಮಾನಕರ್ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಈ ಸಾಧನೆಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details